ಶಾಮನೂರು ಶಿವಶಂಕರಪ್ಪ ಭಾವಚಿತ್ರ ಇರುವ ಸೀರೆ ಗಿಫ್ಟ್ ಗಳಿಗೆ ಬೆಂಕಿ ಇಟ್ಟು ಆಕ್ರೋಶ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾಷಾ ನಗರದಲ್ಲಿ ಗಿಫ್ಟ್ ಹಂಚಿಕೆ ಮಾಡಿದ್ದು ಅಲ್ಲಿನ ಸ್ಥಳೀಯ ಮಹಿಳೆಯರು ಶಾಮನೂರು ಶಿವಶಂಕರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಸರಿಯಾದ ಚರಂಡಿ ಇಲ್ಲ, ರಸ್ತೆ ಇಲ್ಲ. ಪ್ರಾಣಿಗಳು ವಾಸ ಮಾಡುವ ರೀತಿ ನಾವು ವಾಸ ಮಾಡುತ್ತಾ ಇದ್ದೇವೆ. ಮೂಲಭೂತ ಸೌಕರ್ಯಗಳನ್ನು ಒದಗಿಸಿ ಎಂದರೆ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಆದರೆ ಈಗ ಸೀರೆಗಳನ್ನು ಕೊಟ್ಟು ಹೋಗುತ್ತಿದ್ದಾರೆ. ಈ ಸೀರೆಗಳು ಬೇಡ ಎಂದು ಸ್ಥಳೀಯ ಮಹಿಳೆಯರು ಕೊಟ್ಟ ಸೀರೆಗಳನ್ನು ರಸ್ತೆಯಲ್ಲಿ ಎಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.