ಕಾಲೇಜುಗಳಲ್ಲಿ ಪತ್ರಿಕೋದ್ಯಮ ವಿಷಯ ಆರಂಭಿಸುವಂತೆ ಸಿಎಂ ಗೆ ಮನವಿ ಸಲ್ಲಿಸಿದ ಹಿರಿಯ ಪತ್ರಕರ ಸುಭಾಷ ಬಣಕಾರ
ದಾವಣಗೆರೆ: ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಪತ್ರಿಕೋದ್ಯಮ ವಿಷಯ ಆರಂಭಿಸುವಂತೆ ಮಾಧ್ಯಮ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ವರದಿಗಾರ ಸುಭಾಷ್ ಬಣಗಾರ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರದ ಮುಖೇನ ಮನವಿ ಸಲ್ಲಿಸಿದ್ದಾರೆ.
ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಪತ್ರಿಕೋದ್ಯಮ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ಪ್ರಾರಂಭಿಸಬೇಕೆಂದು ಈಗಾಗಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿತ್ತು. ಅವರು ಶಿಕ್ಷಣ ಇಲಾಖೆಯ ಮುಖ್ಯಮಂತ್ರಿಗಳ ಅಧೀನ ಕಾರ್ಯದರ್ಶಿಗಳು ಪತ್ರ ಬರೆದು ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ ಎಂದಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ವಹಿಸಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಶೀಘ್ರವಾಗಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ.