ಬೆಂಗಳೂರು: ಭಾರತೀಯ ಜನತಾ ಪಕ್ಷ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ನಾಳೆ ಮತ್ತು ನಾಡಿದ್ದು ವಾರಾಂತ್ಯ ಎರಡು ದಿನ ಬೆಂಗಳೂರು ನಗರದಲ್ಲಿ ರೋಡ್ ಶೋ ಆಯೋಜಿಸಿತ್ತು.
ಇದೇ ವೇಳೆ ನೀಟ್ ಪರೀಕ್ಷೆಯೂ ನಡೆಯುತ್ತಲಿದ್ದ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗಬಾರದೆಂಬ ನಿಟ್ಟಿನಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ.
ಆರಂಭದಲ್ಲಿ ಶನಿವಾರ ಒಂದೇ ದಿನ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಆದರೆ ಜನರಿಗೆ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ಎರಡು ದಿನಗಳಲ್ಲಿ ರೋಡ್ ಶೋ ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ನೀಟ್ ಪರೀಕ್ಷೆ ಹಿನ್ನಲೆಯಲ್ಲಿ ಮೋದಿ ರೋಡ್ ಶೋ ಕಾರ್ಯಕ್ರಮದ ಸಮಯ ಮತ್ತು ದೂರದಲ್ಲಿ ಕಡಿತ ಮಾಡಲಾಗಿದೆ.
ರೋಡ್ ಶೋ ನಿಗದಿಯಾದ ರೂಟ್ ಗಳ ದಿನಾಂಕವನ್ನು ಅದಲು ಬದಲು ಮಾಡಲಾಗಿದೆ. ಶನಿವಾರ ಮತ್ತು ಭಾನುವಾರಗಳ ರೋಡ್ ಶೋಗಳಲ್ಲಿ ಕೊಂಚ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಮೋದಿ ರೋಡ್ ಶೋ ಸಾಗುವ ಸಮಯವನ್ನು ಕಡಿತಗೊಳಿಸಲಾಗಿದ್ದು, ನಗರದ ಕೆಲವು ಕ್ಷೇತ್ರದಲ್ಲಿ ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋವನ್ನು ಶನಿವಾರಕ್ಕೆ ಶಿಫ್ಟ್ ಮಾಡಲಾಗಿದೆ.
ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ಶಿಫ್ಟ್ ಮಾಡಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಯಿಂದ 12.30 ರವರೆಗೆ ರೋಡ್ ಶೋ ನಡೆಯಲಿದೆ. ಶನಿವಾರ ಜೆ.ಪಿ. ನಗರ ಬ್ರಿಗೇಡ್ ಮಿಲೇನಿಯಂನಿಂದ ಮಲ್ಲೇಶ್ವರಂ ಸರ್ಕಲ್ ಮಾರಮ್ಮ ಟೆಂಪಲ್ ವರೆಗೆ ರೋಡ್ ಶೋ ನಡೆಯಲಿದೆ.
ಇನ್ನು ಭಾನುವಾರ ಬೆಳಗ್ಗೆ 10 ಗಂಟೆಯಿಂದ 11.30 ರವರೆಗೆ ರೋಡ್ ಶೋ ನಡೆಯಲಿದೆ. ಭಾನುವಾರ ಸುರಂಜನ್ ದಾಸ್ ಸರ್ಕಲ್ ನಿಂದ ಟ್ರಿನಿಟಿ ಸರ್ಕಲ್ ವರೆಗೆ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ಜತೆಗೆ ಭಾನುವಾರ ನಡೆಯುವ ರೋಡ್ ಶೋದಲ್ಲಿ 4 ಕಿ.ಮೀ. ಕಡಿತಗೊಳಿಸಲು ನಿರ್ಧಾರ ಮಾಡಲಾಗಿದೆ. ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿ ನಿರ್ದೇಶನದಂತೆ ರೋಡ್ ಶೋ ಬದಲಾವಣೆ ಮಾಡಿಕೊಳ್ಳಲಾಗಿದೆ.
