ಡಿಕೆಶಿ ತನಿಖೆಗೆ ತಡೆ ಆದೇಶ ವಿಚಾರಣೆ ಮುಂದಕ್ಕೆ

ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸುವುದಕ್ಕೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಮುಂದೂಡಿದೆ.
ಡಿ.ಕೆ.ಶಿವಕುಮಾರ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ‘ಹೈಕೋರ್ಟ್ ಎದುರು ಇದೇ 23ರಂದು ಈ ಕುರಿತ ವಿಚಾರಣೆ ನಿಗದಿಯಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆಗ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸಂಜಯ್ ಕರೋಲ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿರುವುದಾಗಿ ತಿಳಿಸಿತು.