ಜಿಲ್ಲಾ ಕ ಸಾ ಪ ವತಿಯಿಂದ ಡಾ.ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಆತ್ಮೀಯ ಸನ್ಮಾನ’

ಜಿಲ್ಲಾ ಕ ಸಾ ಪ ವತಿಯಿಂದ ಡಾ.ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಆತ್ಮೀಯ ಸನ್ಮಾನ'

ದಾವಣಗೆರೆ : ಇಂದು ದಾವಣಗೆರೆ ನಗರದ ಕುವೆಂಪು ಕನ್ನಡ ಭವನದಲ್ಲಿ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕುವೆಂಪು ಕನ್ನಡ ಭವನಕ್ಕೆ ಪ್ರಥಮ ಬಾರಿಗೆ ಆಗಮಿಸಿದ್ದ ಶ್ರೀಮತಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರನ್ನು ಜಿಲ್ಲಾ ಕ ಸಾ ಪ ಪರವಾಗಿ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ವೈವಿಧ್ಯಮಯವಾದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಹೀಗೆ ಅವರ ಸೇವೆ ನಿರಂತರವಾಗಿ ಮುಂದುವರೆಯಲಿ ಎಂದು ಬಿ ವಾಮದೇವಪ್ಪ ನವರು ಆಶಯ ವ್ಯಕ್ತಪಡಿಸಿದರು . ಈ ಸಂದರ್ಭದಲ್ಲಿ ವೇದಿಕೆ ಮೇಲೆ ಡಿ ಆರ್ ಆರ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸ ವರ್ಗದವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಬಿ ದಿಳ್ಯಪ್ಪ, ಹಿರಿಯ ಸಾಹಿತಿ ಬಾ ಮ ಬಸವರಾಜಯ್ಯ ಇನ್ನು ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!