ಆಸ್ಪತ್ರೆಯಲ್ಲಿಯೇ ಮಹಿಳೆ ಮೇಲೆ ಅತ್ಯಾಚಾರ

ಆಸ್ಪತ್ರೆಯಲ್ಲಿಯೇ ಮಹಿಳೆ ಮೇಲೆ ಅತ್ಯಾಚಾರ

ಕಲಬುರಗಿ: ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ಅತ್ಯಾರ ನಡೆದ ಘಟನೆ ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆಸ್ಪತ್ರೆಯಲ್ಲಿ ನಡೆದಿದೆ.
ನಗರದ ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮೆಹಬೂಬ್ ಪಾಷಾ (40) ಎಂಬಾತ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರು ಅತ್ಯಾಚಾರದ ದೃಶ್ಯಗಳನ್ನು ಚಿತ್ರೀಕರಿಸಿದ್ದು, ಇದರ ಆಧಾರದ ಮೇಲೆ ಬ್ರಹ್ಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ‌ ಒಳಗಾದ ಮಹಿಳೆ ಕಳೆದ ಆರು ತಿಂಗಳಿಂದ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!