ಉಚಿತ ವಿದ್ಯುತ್ ಪಡೆಯಲು ನೋಂದಣಿಗೆ ಆಧಾರ್ ಸಾಕು

ಉಚಿತ ವಿದ್ಯುತ್ ಪಡೆಯಲು ನೋಂದಣಿಗೆ ಆಧಾರ್ ಸಾಕು

ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಈ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಇಂಧನ ಇಲಾಖೆ ಈ ಸ್ಪಷ್ಟನೆ ನೀಡಿದೆ.
ಆಧಾರ್‌ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿದರೆ ಸಾಕು ಎಂದು ಇಂಧನ ಇಲಾಖೆ ತಿಳಿಸಿದೆ.

ಈ ಯೋಜನೆಯು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಗೃಹ ವಿದ್ಯುತ್ ಬಳಕೆದಾರಿಗೂ ಅನ್ವಯವಾಗಲಿದೆಯೇ ಎನ್ನುವ ಪ್ರಶ್ನೆಗೆ ಈ ವಿವರ ನೀಡಲಾಗಿದೆ.
ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ.

ಗೃಹ ಜ್ಯೋತಿ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜುಲೈ 1ರಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಯ ನೋಂದಣಿ ಇದೇ 18ರಿಂದ ಆರಂಭವಾಗಲಿದೆ.
ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/gruhajyothi ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.

Leave a Reply

Your email address will not be published. Required fields are marked *

error: Content is protected !!