ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಅಬಾವಿ ಮಹಾಸಭಾ ದಾವಣಗೆರೆ ಯುವ ಘಟಕ ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ದಾವಣಗೆರೆ :ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದನೆಂದು ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಎಂಬಾತನನ್ನು ಚಿತ್ರದುರ್ಗ ನಗರದಲ್ಲಿ ಅಪಹರಿಸಿಕೊಂಡು ಹೋಗಿ ಮೊನ್ನೆ ಬೆಂಗಳೂರಿನಲ್ಲಿ ಕೊಲೆ ಮಾಡಿ ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಚಿತ್ರ ನಟ ದರ್ಶನ್ ಅಭಿಮಾನಿಗಳು ಹಾಗೂ ಈ ಕೃತ್ಯ ದಲ್ಲಿ ಭಾಗಿಯಾಗಿರುವವರು ಅದೆಷ್ಟೇ ಶಕ್ತಿಶಾಲಿಗಳಾಗಿದ್ದರು ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ಜಿಲ್ಲಾಧಿಕಾರಿ ವೆಂಕಟೇಶ್ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾವಣಗೆರೆ ಜಿಲ್ಲಾ ಯುವ ಘಟಕದ , ಕಾರ್ಯದರ್ಶಿಗಳಾದ ಶಿವರತನ್, ಶಿವರಾಜ್ ಜೆ, ಅಜಿತ್ ಆಲೂರ್, ಸಂತೋಷ್ ಅಣಬೇರು, ಅನಿಲ್ ಬಸವರಾಜ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!