ಅಶ್ಲೀಲ ವಿಡಿಯೋ ಪ್ರಕರಣದ ಮಹಿಳೆಯ ಅಪಹರಣ : ಎಚ್.ಡಿ ರೇವಣ್ಣ ಬಂಧನ
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್ಡಿ ರೇವಣ್ಣಗೆ ಉರುಳಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.
ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಇವತ್ತು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ
ಲೈಂಗಿಕ ಪ್ರಕರಣ ಮತ್ತು ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ ಡಿ ರೇವಣ್ಣವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಬಂಧಿಸಿದ್ದಾರೆ.