ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಪ್ರವೇಶದ ಶುಲ್ಕ ಏರಿಕೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ

IMG-20211228-WA0008

 

ದಾವಣಗೆರೆ: ಸರ್ಕಾರಿ ಕೋಟಾದಡಿಯಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಹದಡಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಇಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ
ಮಾಡದೆ ಹಿಂದಿನ ವಷದ ಶುಲ್ಕವನ್ನೇ ಮುಂದುವರೆಸಲು ತೀರ್ಮಾನಿಸಿರುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಇತ್ತೀಚಿಗೆ ಹೇಳಿಕೆ ಕೊಟ್ಟಿದ್ದರು. ಆದರೆ ಈಗ ಸರಕಾರ ಕೆಲವು ಪರೋಕ್ಷ ಕ್ರಮಗಳ ಮೂಲಕ ಶುಲ್ಕ ಹೆಚ್ಚಳಕ್ಕೆ ದಾರಿ ಮಾಡಿಕೊಡುವ ಆದೇಶವನ್ನು ಹೊರಡಿಸಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಿಡಿಕಾರಿದರು.

ಹೆಚ್ಚಿನ ಶುಲ್ಕಗಳನ್ನು ಪಡೆಯದಂತೆ ನಿವೃತ್ತ  ನ್ಯಾಯಾಧೀಶರ ನೇತೃತ್ವದ ಶುಲ್ಕ ನಿಯಂತ್ರಣ ಸಮಿತಿ ಯ ಮೂಲಕ ಕಡಿವಾಣ ಹಾಕಲಾಗಿತ್ತು. ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಹಾಗೆ ಸರ್ಕಾರವೇ ಈ ಎಲ್ಲ ಹೆಚ್ಚುವರಿ ಶುಲ್ಕಗಳನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡಿ ಕಾಲೇಜುಗಳಿಗೆ ನೀಡುತ್ತಿದೆ. ಅದೇ ರೀತಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಶುಲ್ಕಗಳಿಗೂ ಹಾಗೂ ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜಿನ ಶುಲ್ಕಗಳಿಗೂ ೪೦ ಸಾವಿರ ರೂಪಾಯಿಗಳವರೆಗೆ ಹೆಚ್ಚಳ ಮಾಡಿ ಆರ್ಥಿಕ ಹೊರೆ ಹೇರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರಕಾರದ ಈ ನಡೆಯಿಂದಾಗಿ ಇಂಜಿನಿಯರಿಂಗ್ ಓದುವ ಕನಸು ಕಂಡಿರುವ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ಕನಸಾಗಿಯೇ ಉಳಿಯುವಂತಾಗಿದೆ. ಆದ್ದರಿಂದ ಸರಕಾರ ಆದೇಶ ಹಿಂಪಡೆದು ಹಿಂದಿನ ಶುಲ್ಕವನ್ನೇ ಮುಂದುವರೆಸುಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕೊಳ್ಳೇರ, ನರೇಂದ್ರ, ಭರತ್, ನವೀನ್ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದರು.

Leave a Reply

Your email address will not be published. Required fields are marked *

error: Content is protected !!