ಜಿಎಂಐಟಿ ಕಾಲೇಜಿಗೆ ಐಸಿಟಿ ಅಕಾಡೆಮಿ ವತಿಯಿಂದ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್

Academic Excellence Award by ICT Academy to GMIT College

ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ಬೆಸ್ಟ್ ಅಕಾಡೆಮಿಕ್ ಕೋಆರ್ಡಿನೇಟರ್ ಅವಾರ್ಡ್

ಬೆಂಗಳೂರಿನ ಐ ಟಿ ಸಿ ಗಾರ್ಡೇನಿಯ ಹೋಟೆಲ್ ನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಜಿಎಂಐಟಿ ಕಾಲೇಜಿಗೆ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ ಮತ್ತು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ರವರಿಗೆ ಬೆಸ್ಟ್ ಅಕಾಡೆಮಿಕ್ ಕೋಆರ್ಡಿನೇಟರ್ ಅವಾರ್ಡ್ ಲಭಿಸಿದೆ.

Academic Excellence Award by ICT Academy to GMIT College

ICT ಅಕಾಡೆಮಿಯು ರಾಜ್ಯ ಸರ್ಕಾರಗಳು ಮತ್ತು ಕೈಗಾರಿಕೆಗಳ ಸಹಯೋಗದೊಂದಿಗೆ ಭಾರತ ಸರ್ಕಾರದ ಉಪಕ್ರಮವಾಗಿದೆ. ICT ಅಕಾಡೆಮಿ ಲಾಭ ರಹಿತ ಸಂಸ್ಥೆಯಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಜಂಟಿ ಉದ್ಯಮವಾಗಿದೆ. ಇತ್ತೀಚೆಗೆ ನಡೆದ ಐಸಿಟಿ ಅಕಾಡೆಮಿ ಬ್ರಿಡ್ಜ್ -2023 ಕಾರ್ಯಕ್ರಮದಲ್ಲಿ ಜಿಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ಅಕಾಡಮಿಕ್ ಎಕ್ಸಲೆನ್ಸ್ ಪ್ರಶಸ್ತಿ ಮತ್ತು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ರವರಿಗೆ ಕೋಆರ್ಡಿನೇಟರ್ ಪ್ರಶಸ್ತಿ ನೀಡಿ ಗೌರವಿಸಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನೇಕ ರೀತಿಯ ತರಬೇತಿ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಸರ್ವತೋನ್ಮುಖ ಬೆಳವಣಿಗೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಪಾರವಾದ ಮೆಚ್ಚುಗೆಯನ್ನು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಯಿತು.

ಪ್ರಶಸ್ತಿ ಸಮಾರಂಭದಲ್ಲಿ ಜಿಎಂಐಟಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಡಾ ಕೆ ದಿವ್ಯಾನಂದ, ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ರೋಬೋಟಿಕ್ಸ್ ಅಂಡ್ ಆಟೋಮೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ರಾಜಕುಮಾರ್ ಡಿಜಿ, ಜಿಎಂಎಸ್ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸಂಯೋಜಕರಾದ ಪ್ರೊ ಪ್ರಮೋದ್, ಪ್ರೊ ಸಚಿನ್, ಜಿಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಪ್ರೊ ಅಶೋಕ್, ಪ್ರೊ ಯಾಸ್ಮಿನ್, ಪ್ಲೇಸ್ಮೆಂಟ್ ಸಂಯೋಜಕರಾದ ಆಕಾಶ್ ಗೌಡ ಉಪಸ್ಥಿತರಿದ್ದರು.

Academic Excellence Award by ICT Academy to GMIT College

ಪ್ರಶಸ್ತಿ ವಿಜೇತ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಎಲ್ಲಾ ಅಧ್ಯಾಪಕ ವರ್ಗದವರಿಗೂ ಕಾಲೇಜಿನ ಆಡಳಿತ ಮಂಡಳಿಯ ಚೇರ್ಮನ್ ಶ್ರೀ ಜಿಎಂ ಲಿಂಗರಾಜು ಮತ್ತು ಆಡಳಿತ ಅಧಿಕಾರಿ ಶ್ರೀ ವೈ ಯು ಸುಭಾಷ್ ಚಂದ್ರ ಅಭಿನಂದನೆಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!