ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ಬಳಿ ಲಖನೌ–ಗೋರಖಪುರ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟು 40 ಜನ ಗಾಯಗೊಂಡಿದ್ದಾರೆ.
ಅಯೋಧ್ಯೆಯ ಹೊರವಲಯದ ಅಂಬೇಡ್ಕರ್ ನಗರದ ಬಳಿ ತಿರುವಿನಲ್ಲಿ ಖಾಸಗಿ ಬಸ್ ಒಂದು, ವೇಗವಾಗಿ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆತರುತ್ತಿದ್ದ ಬಸ್ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆ ಅಪಘಾತದಲ್ಲಿ ಇಲ್ಲಿಯವರೆಗೆ ಏಳು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಬಸ್‌ನಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ತೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.
12ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಅಪಘಾತಕ್ಕೀಡಾದ ವಾಹನದಲ್ಲಿ ಸಿಲುಕಿರುವವರನ್ನು ನಾವು ಸ್ಥಳಾಂತರಿಸುತ್ತಿದ್ದೇವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗುತ್ತಿದೆ” ಎಂದು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಹೇಳಿದ್ದಾರೆ
