accident; ಸಾರ್ವಜನಿಕರ ಸುರಕ್ಷಿತ ಪ್ರಯಾಣ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಕೈಗೊಳ್ಳಿ

ದೂಡಾ ಅಧ್ಯಕ್ಷರಾಗಿ, ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ

ದಾವಣಗೆರೆ, ಆ.23: ನಗರದಲ್ಲಿ ವಾಹನಗಳ ಸುಗಮಗೊಳಿಸುವುದು ಮತ್ತು ರಸ್ತೆ ಅಪಘಾತಗಳ (road accident) ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸಂಚಾರಿ ನಿಯಮಗಳನ್ನು ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿದರೇ ಆಗ ಮಾತ್ರ  ಅಪಘಾತದಿಂದ ದೂರವಿರಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದರು.

ಜಿಲ್ಲೆಯಲ್ಲಿ 28 ಮಾರಣಾಂತಿಕ ತೀವ್ರ ಅಪಘಾತ ಸ್ಥಳಗಳನ್ನು ಗುರುತಿಸಿದ್ದು, ಇಲ್ಲಿ ಸಂಭವಿಸುವ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಮತ್ತು ಲೋಕೋಪಯೋಗಿ ಹಾಗೂ ಇತರೆ ಇಲಾಖೆಗಳು ಸೂಕ್ತ ಕ್ರಮವಹಿಸಬೇಕು.

ಬೆಂಗಾವಲು ವಾಹನ ಗುದ್ದಿ ಬೈಕ್ ಸವಾರ ಸಾವು‌.. ಮಾನವೀಯತೆ ಮರೆತರೇ ಗೃಹಸಚಿವ

ಜಿಲ್ಲೆಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ರಸ್ತೆ ಮಾರ್ಗಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ (national highways) ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸೂಚನಾ ಫಲಕಗಳನ್ನು ಕೂಡಲೇ ಅಳವಡಿಸಬೇಕು. ಇದರಿಂದ ಸಂಭವಿಸಬಹುದಾದ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿರುವ  ಕೆರೆ ಪಕ್ಕದ ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದ್ದಲ್ಲಿ ಅಂತಹ ರಸ್ತೆಗಳನ್ನು ಕೂಡಲೇ ದುರಸ್ತಿಕರಣಗೊಳಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ದೂಡಾ ಆಯುಕ್ತರಾದ ಬಸವನಗೌಡ ಕೊಟೂರು, ಪಾಲಿಕೆ ಆಯುಕ್ತ ರೇಣುಕಾ, ಜಿಲ್ಲಾ ಲಾರಿ, ಖಾಸಗಿ ಬಸ್, ಆಟೋ ಚಾಲಕರ ಸಂಘದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!