ಶನಿವಾರ ಖಾತೆ ಹಂಚಿಕೆ ದಾವಣಗೆರೆಯ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವರಾಗುವ ಯೋಗ
ಬೆಂಗಳೂರು: ಶನಿವಾರ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ದಾವಣಗೆರೆ ಜಿಲ್ಲೆಯಿಂದ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.
ಹಲುವ ವರ್ಷಗಳಿಂದ ಜಿಲ್ಲಾ ಉಸ್ತುವಾರಿ ಸಚಿವರ ಕೊರತೆ ಎದುರಿಸುತ್ತಿದ್ದ ದಾವಣಗೆರೆ ಜಿಲ್ಲೆಗೆ ಕೊನೆಗೂ ಉಸ್ತುವಾರಿ ಸಚಿವರ ಭಾಗ್ಯ ಒಲಿದು ಬರಲಿದೆ.
ಅಂದಹಾಗೆ, ದೆಹಲಿಯಿಂದ ವಾಪಸಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, ಸಂಜೆ ವೇಳೆಗೆ ಖಾತೆ ಹಂಚಿಕೆಯಾಗಲಿದೆ ಎಂದು ಹೇಳಿದ್ದಾರೆ.
ನಾಲ್ಕೈದು ಸಚಿವ ಸ್ಥಾನಗಳನ್ನು ಹೊರತುಪಡಿಸಿ ಉಳಿದ ಸ್ಥಾನಗಳನ್ನು ಒಂದೇ ದಿನದಲ್ಲಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.
ಸಚಿವ ಸಂಪುಟವು ಹಿರಿಯರು ಮತ್ತು ಯುವ ಜನರ ಮಿಶ್ರಣವಾಗಿದೆ. ನಾಳೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಮಯವೂ ನಿಗದಿಯಾಗಿದೆ. ಬಹುತೇಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.