ಬೆಂಗಳೂರು: ಎಲ್ಲೆಡೆ ಮಳೆ ಅನಾಹುತ ಮುಂದುವರಿಯಲಿದೆ. ದೇಶಾದ್ಯಂತ ಜಲಪ್ರಳಯ ಎದುರಾಗಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸುನಾಮಿ ಸಹ ಬರುವ ಸಾಧ್ಯತೆ ಇದೆ. ಭೂಮಿಯಿಂದ ಹೊಸಹೊಸ ವಿಷಜಂತುಗಳು ಉದ್ಭವಿಸಲಿದೆ. ಜನರು ಮನೆಯಿಂದ ಹೊರಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಕೊರೊನಾ ಬಗ್ಗೆ ಈ ಹಿಂದೆ ಹೇಳಿದ್ದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ. ಎಲ್ಲಾ ಮಾತುಗಳು ನಿಜವಾಗಿದೆ. ಇದಕ್ಕಿಂತಲೂ ಹೆಚ್ಚಿನ ಕಷ್ಟ ಕಾಲ ಎದುರಾಗಲಿದೆ. ಇದಕ್ಕೆಲ್ಲಾ ಪರಿಹಾರ ದೇವರನ್ನು ಪೂಜಿಸುವುದು.
ಇತ್ತೀಚಿಗೆ ಭಗವಂತನ ಪೂಜೆ ಆಡಂಬರವಾಗಿದೆ.ಯೋಗ್ಯ ಸಾಧುಗಳಿದ್ದಾರೆ. ಗದ್ದುಗೆಗಳಿವೆ ಎಲ್ಲರೂ ಸೇರಿ ಪ್ರಾರ್ಥಿಸಿದ್ರೆ ಜಗತ್ತು ಉಳಿಯುತ್ತದೆ ಎಂದು ಸಲಹೆ ನೀಡಿದರು.
