dalit voilence; ದಲಿತರ ಮೇಲಾಗುವ ದೌರ್ಜನ್ಯ ತಡೆಗೆ ಕ್ರಮಗೊಳ್ಳಲು ಎಸ್ ಪಿ ಉಮಾ ಪ್ರಶಾಂತ್ ಸೂಚನೆ

ದಾವಣಗೆರೆ, ನ. 8: ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ (atrocities on Dalits) ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಆ ಪ್ರಕರಣಗಳ ಚಾರ್ಜ್‍ ಶೀಟ್ ಹಾಕಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದರು.

siddaramaiah; ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ: ಮುಖ್ಯಮಂತ್ರಿ

ಸಭೆಯಲ್ಲಿ ಭಾಗವಹಿಸಿದ ಡಿ.ಎಸ್.ಎಸ್ ಪ್ರತಿನಿಧಿಗಳು ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಎಸ್.ಸಿ, ಎಸ್.ಟಿ ಕುಂದುಕೊರತೆ ಸಭೆ ನಡೆಸಬೇಕು, ಸಮಾಜ ಕಲ್ಯಾಣ ಅಧಿಕಾರಿಗಳು ಸಹ ಶೋಷಣೆ ದೌರ್ಜನ್ಯಕ್ಕೆ ಒಳಗಾದ ಮನೆಗೆ ಭೇಟಿ ನೀಡಿ ತ್ವರಿತ ಗತಿಯಲ್ಲಿ ನ್ಯಾಯ ಒದಗಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಸಂತೋಷ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪಿ. ರಮೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!