ಬಾಲಿವುಡ್ ನಟ ನಾನಾ ಪಾಟೇಕರ್ ಆಗಾಗ ವಿವಾದಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಕಳೆದ ವರ್ಷ ಮಿಟೂ ಅಭಿಯಾನದಲ್ಲಿ ಪಾಟೇಕರ್ ಹೆಸರು ಕೇಳಿಬಂದಿತ್ತು. ಸಧ್ಯ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಗೆ ಹೊಡೆಯುವ ಮೂಲಕ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹೌದು.. ನಾನಾ ಪಾಟೇಕರ್ ಹೆಸರು ವಿವಾದಗಳಲ್ಲಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಸಧ್ಯ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯೊಬ್ಬನ ತಲೆಗೆ ಪಾಟೇಕರ್ ಹೊಡೆದ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನಟನ ವರ್ತನೆಗೆ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.
