ನಟ ರವಿಚಂದ್ರನ್ ತಾಯಿ ವಿಧಿವಶ

ravichandran-mother-pattammal-veeraswamy-death

ಬೆಂಗಳೂರು : ಸ್ಯಾಂಡಲ್ ವುಡ್ ನ ಪ್ರಖ್ಯಾತ ನಟ, ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರ ಸ್ವಾಮಿ ಸೋಮವಾರವಾರವಾದ ಇಂದು ವಿಧಿವಶವಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಪಟ್ಟಮ್ಮಾಳ್ ವೀರಸ್ವಾಮಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಬೆಂಗಳೂರಿನಲ್ಲಿರುವ ರವಿಚಂದ್ರನ್ ಅವರ ನಿವಾಸದಲ್ಲಿ ಇಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!