ADC: ದಾವಣಗೆರೆ ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್ ವರ್ಗಾವಣೆ, ಶೀಲವಂತ ಶಿವಕುಮಾರ್ ನೂತನ ಎಡಿಸಿ

ದಾವಣಗೆರೆ (ADC): ದಾವಣಗೆರೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲೋಕೇಶ್ ಪಿ ಎನ್ ಅವರನ್ನು ರಾಜ್ಯ ಸರ್ಕಾರ ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ.
ಹಿರಿಯ ಕೆ ಎ ಎಸ್ ಅಧಿಕಾರಿ ಬೀದರ್ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೀಲವಂತ ಶಿವಕುಮಾರ್ ಅವರನ್ನು ಆಡಳತಾತ್ಮಕ ಹಿತದೃಷ್ಟಿಯಿಂದ ದಾವಣಗೆರೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ದಂಡಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಿದೆ.