ಅಧಿವೇಶನದಲ್ಲಿ ಚರ್ಚೆ ನಡೆಸಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿ – ಅಹಿಂದ ಚೇತನ ಅಧ್ಯಕ್ಷ ಆಗ್ರಹ

IMG-20210914-WA0004

ದಾವಣಗೆರೆ: ರಾಜ್ಯ ಸರ್ಕಾರ ಪ್ರಸ್ತುತ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆ ನಡೆಸಿ ಜಾತಿ ಗಣತಿ ವರದಿಯನ್ನು ಬಿಡುಗಡೆಗೊಳಿಸಬೇಕು ಎಂದು ಅಹಿಂದ ಚೇತನ ಸಂಘಟನೆಯ ಅಧ್ಯಕ್ಷ ವಿನಾಯಕ ಕಟ್ಟಿಕರ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆಯಲ್ಲಿ ಅಂದಾಜು ೧೮೦ ಕೋಟಿ ರೂ.ಗಳನ್ನು ವ್ಯಯಿಸಿ ಜಾತಿ ಗಣತಿ ನಡೆಸಲಾಗಿದೆಯಾದರೂ, ಸಮೀಕ್ಷೆ ನಡೆಸಿ ೫ ವರ್ಷಗಳಾದರೂ ಸರ್ಕಾರಗಳು ವರದಿ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿವೆ ಎಂದು ಸರ್ಕಾರಗಳ ವಿರುದ್ಧ ಹರಿಹಾಯ್ದರು.

ಸರ್ಕಾರ ಜಾತಿಗಣತಿ ವರದಿ ಬಿಡುಗಡೆಗೊಳಿಸಿದರೆ ರಾಜ್ಯದಲ್ಲಿರುವ ಜನಸಂಖ್ಯೆಯ ಶೇ.೮೦ ರಷ್ಟು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದ ಅವರು, ಅಲ್ಲದೇ, ಜಾತಿಗಳ ಜನಸಂಖ್ಯೆ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳ ಅನಾವರಣವಾಗಲಿದೆ ಎಂದರು.

ಜಾತಿ ಗಣತಿ ವರದಿ ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಸಂಘಟನೆಯಿಂದ ಮೊದಲ ಹಂತದಲ್ಲಿ ಜಾಗೃತಿ ಮೂಡಿಸಲಾಗುವುದು. ಸರ್ಕಾರ ವರದಿ ಬಿಡುಗಡೆಗೆ ನಿರ್ಲಕ್ಷ್ಯ ವಹಿಸಿದರೆ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್‍ಯದರ್ಶಿ ರಾಜು ಮೌರ್ಯ, ಎ.ಹಸೇನ್, ಹೆಚ್.ಬಿ.ಕರಿಬಸವರಾಜ, ಸೋಮಪ್ಪ ಮಲ್ಲೂರು, ಎಸ್.ಎಂ.ಸಿದ್ದಲಿಂಗಪ್ಪ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!