ವೀರಶೈವ ಮಹಾಧಿವೇಶನ ಚುನಾವಣೆ ನಂತರಕ್ಕೆ ಮುಂದೂಡಿಕೆ
ಬೆಂಗಳೂರು: ಅಖೀಲ ಭಾರತ ವೀರಶೈವ ಮಹಾಸಭೆಯಿಂದ ನಡೆಸಲುದ್ದೇಶಿಸಲಾಗಿದ್ದ 24ನೇ ಮಹಾ ಅಧಿವೇಶವನ್ನು ವಿಧಾನಸಭಾ ಚುನಾವಣೆ ನಂತರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.
2023ರ ಫೆಬ್ರವರಿ 11ರಿಂದ 13ರವರೆಗೆ ಮೂರು ದಿನಗಳ ಕಾಲ ದಾವಣಗೆರೆಯಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಆ ಸಮಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಬಜೆಟ್ ಅಧಿವೇಶನದ ನಂತರ ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನೀತಿ ಸಂಹಿತ ಜಾರಿಯಾಗುವ ಸಂಭವ ಇರುತ್ತದೆಯಾದ್ದರಿಂದ ಅಧಿವೇಶವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲು ತೀರ್ಮಾನಿಸಲಾಗಿದೆ.
ವಿಧಾನಸಭಾ ಚುನಾವಣೆ ನಂತರ ಅಧಿವೇಶನವನ್ನು ಈಗಾಗಲೇ ನಿಗದಿಯಾಗಿದ್ದ ಸ್ಥಳದಲ್ಲಿ ನಿಗದಿಪಡಿಸಿರುವ ಕಾರ್ಯಕ್ರಮಗಳಂತೆಯೇ ಮೂರು ದಿನ ನಡೆಯಲಿದೆ ಎಂದು ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.