ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭ
ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈ ಅವೃತ್ತಿ) ಪ್ರಥಮ ವರ್ಷದ B.A/B.Com, B.Sc. B.Lib.Sc, B.CA, B.B.A, M.A/M.Com, M.A.-M.C.J, M.Lib.Sc, M.B.A, M.Sc ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು PG Diploma/Diploma/Certificate Courses ಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಜೂ.20 ರಿಂದ ಪ್ರಾರಂಭವಾಗಿದೆ.
ಆಸಕ್ತ ವಿದ್ಯಾರ್ಥಿಗಳು ಕ.ರಾ.ಮು.ವಿ.ಯ ಅಧಿಕೃತ ವೆಬ್ಸೈಟ್ www.ksoumysuru.ac.in ಮೂಲಕ ಮೇಲ್ಕಂಡ ಪದವಿಗಳಿಗೆ / ಕೋರ್ಸಗಳಿಗೆ Online Admission Portal ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ದಾವಣಗೆರೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಬೇಟಿ ನೀಡಿ Online ಮೂಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ ಪ್ರವೇಶಾತಿಯನ್ನು ಪಡೆಯಬಹುದಾಗಿದೆ.BPL Card ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್ಮನ್ ವಿದ್ಯಾರ್ಥಿಗಳಿಗೆ ಹಾಗೂ ಆಟೋ/ಕ್ಯಾಬ್ ಚಾಲಕರುಗಳ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು.
ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ, ಇದರ ಸದುಪಯೋಗವನ್ನು ಪಡೆದುಕೊಳ್ಳುಬಹುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuruac in ವೀಕ್ಷಿಸುವುದು ಅಥವಾ ಮೊ.ನಂ. 9916009318, 8095939359, 6363739884, 9008905457 ಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಕ.ರಾ.ಮು.ವಿ.ಯ ಪ್ರಾದೇಶಿಕ ನಿರ್ದೇಶಕ ಡಾ. ವಿಜಯ್ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.