ಅಡುಗೆ ಸಿಲಿಂಡರ್ ಸ್ಪೋಟ, ಓರ್ವ ಮಹಿಳೆಗೆ ಗಂಭೀರ ಗಾಯ
ದಾವಣಗೆರೆ: ಅಡುಗೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಓರ್ವ ಮಹಿಳೆ ಗಾಯಗೊಂಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.
ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಪೋಟಗೊಂಡಿದ್ದು, ಮನೆಯ ಸುತ್ತ ದಟ್ಟ ಬೆಂಕಿ ಆವರಿಸಿದೆ. ಪರಿಣಾಮವಾಗಿ ಮನೆಯಲ್ಲಿನ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಇಡೀ ಗ್ರಾಮಸ್ಥರು ಸಿಲಿಂಡರ್ ಸ್ಪೋಟಕ್ಕೆ ಬೆಚ್ಚಿಬಿದ್ದಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮಹಿಳೆಗೂ ಹೆಚ್ಚಿನ ಸುಟ್ಟ ಗಾಯಗಳಾಗಿದ್ದು, ಆಕೆಯನ್ನು ಚನ್ನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.