ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಕೀಲ ಜಗದೀಶ್! ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಬೆಂಗಳೂರು: ಆಮ್ ಆದ್ಮಿ ಪಕ್ಷಕ್ಕೆ ಕೆಲವು ತಿಂಗಳ ಹಿಂದೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಇಂದು (ಗುರುವಾರ) ಪಕ್ಷಕ್ಕೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಅವರು, “ಆಮ್ ಆದ್ಮಿ ಪಕ್ಷಕ್ಕೆ ಸೇರಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ತಲುಪಿಸಿದ್ದೇನೆ,” ಎಂದು ಹೇಳಿಕೊಂಡಿದ್ದಾರೆ. “ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಗೂ ಈ ವಿಷಯ ಹೇಳುತ್ತಿದ್ದೇನೆ. ನನ್ನ ರಾಜೀನಾಮೆ ತಕ್ಷಣದಿಂದ ಕಾರ್ಯರೂಪಕ್ಕೆ ಬರಲಿದ್ದು, ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ ಎಂದು ವಿಡಿಯೋ ಹೇಳಿಕೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!