ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯನ್ನ ಬೋರ್ಡ್ ಪಂಚಾಯ್ತಿ ಹೇರಿಕೆ ವಾಪಸ್ ಪಡೆಯುವಂತೆ ಎ ಐ ಡಿ ಎಸ್ ಓ ಪ್ರತಿಭಟನೆ

ದಾವಣಗೆರೆ :ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಯನ್ನು ಬೋರ್ಡ್ ಪಂಚಾಯ್ತಿ ನಡೆಸುವ ಹಠಾತ್ ಹೇರಿಕೆ ಹಿಂಪಡೆಯುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಇಂದು ಜಯದೇವ ವೃತ್ತದ ಬಳಿ ಪ್ರತಿಭಟನೆ ನಡೆಸಿದರು
ಪದವಿ ಪೂರ್ವ ಶಿಕ್ಷಣ ಇಲಾಖೆಯು 12/11/2021 ರಂದು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ 2021ರ ಮರುವಿನ್ಯಾಸ ಕುರಿತು ಸುತ್ತೋಲೆ ಹೊರಡಿಸಿದ್ದು ಈಗ ನಡೆಯುವ ಮಧ್ಯವಾರ್ಷಿಕ ಪರೀಕ್ಷೆಯ ರಾಜ್ಯ ಬೋರ್ಡ್ ಪರೀಕ್ಷೆ ನಡೆಸಲಾಗುತ್ತಿದ್ದು ಇದೆ 29ರಿಂದ ಪರೀಕ್ಷೆ ನಡೆಯಲಿದೆ ಕೇವಲ 15 ದಿನಗಳಲ್ಲಿ ಯಾವುದೇ ಪೂರ್ವ ಸೂಚನೆ ನಾವುಗಳು ಹೀಗೆ ಪರೀಕ್ಷೆ ಬರೆಯಬೇಕು ಇಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಬೇಡಿಕೆಗಳಾದ ಯಥಾಪ್ರಕಾರ ದಂತೆ ಮಧ್ಯವಾರ್ಷಿಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿ ಪರೀಕ್ಷೆ ನಡೆಸಬೇಕು ಹಾಗೂ ಇದರ ಮೌಲ್ಯಮಾಪನ ಅಂತ್ಯ ಪರೀಕ್ಷೆಗೆ ಒಳಪಡಿಸುವುದು ಬೇಡ ಹಾಗೂ ಶೈಕ್ಷಣಿಕ ವೇಳಾಪಟ್ಟಿಯನ್ನು ವಿಸ್ತರಿಸಿ ದ್ವಿತೀಯ ಪಿಯುಸಿ ಅಂತ್ಯ ಪರೀಕ್ಷೆಗಳನ್ನು ಜೂನ್ ತಿಂಗಳಲ್ಲಿ ನಿಗದಿಪಡಿಸಬೇಕೆಂದು ಆಗ್ರಹಿಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ, ಭಾರತಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.