AIIMS: ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನಿಯೋಗದಿಂದ ಸಂಸದೆ ಡಾ ಪ್ರಭಾ ಮಲ್ಲಿಕಾರ್ಜುನ್ ಗೆ ಮನವಿ

ದಾವಣಗೆರೆ: (AIIMS) ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್ )ಯನ್ನು ರಾಯಚೂರಿನಲ್ಲಿ ಸ್ಥಾಪಿಸಲು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಸದಸ್ಯರು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನವದೆಹಲಿಯಲ್ಲಿ ಸಂಸದರ ನಿವಾಸಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಮಿತಿಯ ಮುಖ್ಯಸ್ಥರು ಮಾತನಾಡಿ ರಾಯಚೂರಿನಲ್ಲಿ ಏಮ್ಸ್ ಸಂಸ್ಥೆ ಸ್ಥಾಪಿಸಲು ಒತ್ತಾಯಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಈ ಧರಣಿ 1043ನೇ ದಿನಕ್ಕೆ ಮುಂದುವರೆದಿದ್ದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಇದನ್ನು ಕರ್ನಾಟಕ ರಾಜ್ಯದ ಪ್ರಮುಖ ಬೇಡಿಕೆ ಎಂದು ಪರಿಗಣಿಸಿ, ಈ ನಮ್ಮ ಸುದೀರ್ಘ ಹೋರಾಟಕ್ಕೆ ಸ್ಪಂದಿಸಿ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ ಶಿಫಾರಸ್ಸನ್ನು ಮಹತ್ವದೆಂದು ಪರಿಗಣಿಸಿ ಪ್ರಧಾನ ಮಂತ್ರಿಯವರನ್ನು ನಿಯೋಗದ ಮೂಲಕ ಭೇಟಿ ಮಾಡಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ’ ಒತ್ತಾಯಿಸಬೇಕೆಂದು ಮನವಿ ಸಲ್ಲಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದು ಹೋರಾಟ ಸಮಿತಿ ಸದಸ್ಯರಿಗೆ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರುಗಳು ಉಪಸ್ಥಿತರಿದ್ದರು.