ಎಐಟಿಯುಸಿ ಜಿಲ್ಲಾಧ್ಯಕ್ಷರಾಗಿ ರಾಘವೇಂದ್ರ ನಾಯರಿ‌, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ. ಉಮೇಶ್ ಆಯ್ಕೆ

AIUTUC PRESIDENT AND SECRETARY

ದಾವಣಗೆರೆ: ಎಐಟಿಯುಸಿ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ನಾಯರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ. ಉಮೇಶ್ ಆಯ್ಕೆಯಾಗಿದ್ದಾರೆ.

ಇಲ್ಲಿನ ಅಶೋಕ ರಸ್ತೆಯಲ್ಲಿರುವ ಕಾಂ ಪಂಪಾಪತಿ ಭವನದಲ್ಲಿ ನಡೆದ ಸಭೆಯಲ್ಲಿ ಸರ್ವಸಮ್ಮತ ರಿಂದ ಈ ಆಯ್ಕೆ ಮಾಡಲಾಯಿತು. ಎಂದು ಎಐಟಿಯುಸಿ ಜಿಲ್ಲಾ ಸಮಿತಿ ಖಜಾಂಚಿ ಆನಂದರಾಜ್ ತಿಳಿಸಿದ್ದಾರೆ.

ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಆನಂದರಾಜ್‌ ಅವರು, ಎಐಟಿಯುಸಿ ನೇತೃತ್ವದಲ್ಲಿ ಇನ್ನೂ ಹಲವಾರು ದುಡಿಯುವ ವರ್ಗದ ಕಾರ್ಮಿಕರನ್ನು ಸಂಘಟಿಸಿ ಅವರಿಗೆ ನ್ಯಾಯ ದೊರಕಿಸಿಕೊಡಲು ಎಲ್ಲರೂ ಸೇರಿ ಶ್ರಮಿಸಬೇಕು ಎಂದು‌ ಕರೆ ನೀಡಿದರು.

ಸಭೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ನೂತನ ಕಾರ್ಯದರ್ಶಿ ಆವರಗೆರೆ ಚಂದ್ರು, ಸುರೇಶ್, ಶೇಖರಪ್ಪ, ಪಂಪಾಪತಿ ರೈತ ಕಾರ್ಮಿಕರ ಕಲ್ಯಾಣಾಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷರಾದ ಟಿ. ಎಸ್ ನಾಗರಾಜ್, ಮುಖಂಡರುಗಳಾದ ಕೆ ಜಿ ಶಿವಮೂರ್ತಿ, ಎಂ.ಬಿ ಶಾರದಮ್ಮ, ಮಹಮದ್ ಬಾಷಾ, ಆವರಗೆರೆ ವಾಸು, ಎನ್.ಟಿ ಬಸವರಾಜ್, ಜಿ. ಯಲ್ಲಪ್ಪ, ಟಿ.ಈ ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಎಐಟಿಯುಸಿ ಜಿಲ್ಲಾಧ್ಯಕ್ಷರಾಗಿ ರಾಘವೇಂದ್ರ ನಾಯರಿ‌ ಆಯ್ಕೆ

Leave a Reply

Your email address will not be published. Required fields are marked *

error: Content is protected !!