ಅಕ್ರಮ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ: 1.52 ಲಕ್ಷ ಮೌಲ್ಯದ ಗಾಂಜಾ ವಶ

ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಸಿಇಎನ್ ಅಪರಾಧ ಠಾಣೆ ಪೊಲೀಸರು ಬಂಧಿಸಿ, ಆರೋಪಿಗಳಿಂದ 1.52 ಲಕ್ಷ ಮೌಲ್ಯದ 6 ಕೆ.ಜಿ ಗೂ ಅಧಿಕ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಹಮ್ಮದ್ ಆಸೀಫ್ @ ಆಸೀಫ್ ಬಾಷಾ ಮತ್ತು ಮಹಮದ್ ಅಬ್ದುಲ್ ರೆಹಮಾನ್ ಬಂಧಿತರು,
ಹರಿಹರ ತಾಲ್ಲೂಕ್ ಮಿಟ್ಲಕಟ್ಟೆ ಗ್ರಾಮದ ಹತ್ತಿರ ಇರುವ ಶಿವಗಿರಿ ಮಿನಿರೈಸ್ ಮಿಲ್ ರಸ್ತೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿಸಿಆರ್‌ಬಿ ಉಪಾಧೀಕ್ಷಕ ಬಿ.ಎಸ್ ಬಸವರಾಜ್ ನೇತೃತ್ವದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗಿರೀಶ್ ಬಿ.ವಿ ಹಾಗೂ ತಂಡದವರು ದಾಳಿ ನಡೆಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.