alcohol; ಸರಕಾರದ ಆದಾಯಕ್ಕೆ ಕೊಕ್ಕೆ ಹಾಕುತ್ತಿರುವ ಅಬಕಾರಿ ಅಧಿಕಾರಿಗಳು

Part 01 Exclusive Story.

ದಾವಣಗೆರೆ, ಆ.18: ಯಾವುದೇ ಅಂಗಡಿಯಲ್ಲಿ ಯಾವುದೇ ಪದಾರ್ಥ ಕೊಂಡರೂ ಬಿಲ್ ಕೊಡಬೇಕು ಎಂಬ ನಿಯಮವಿದೆ. ಅದರಂತೆ ಕೆಲ ಅಂಗಡಿ ಮಾಲೀಕರು ಬಿಲ್ ಕೊಟ್ಟು ಸರಕಾರಕ್ಕೆ ಆದಾಯ ತರುತ್ತಿದ್ದಾರೆ. ಸರಕಾರಕ್ಕೆ ಆದಾಯ ತಂದುಕೊಡುವ ಅಬಕಾರಿ ಇಲಾಖೆ ತನ್ನ ವ್ಯಾಪ್ತಿಯ ಬಾರ್‌ ಅಂಡ್ ರೆಸ್ಟೋರೆಂಟ್ ಗಳಲ್ಲಿ ಬಿಲ್ ಕೊಡದೇ ಮದ್ಯ (alcohal) ಮಾರಾಟ ಮಾಡುತ್ತಿದ್ದರೂ, ಅಬಕಾರಿ ಡಿಸಿ ಏಕೆ ವೌನವಹಿಸಿದ್ದಾರೆ ಎಂಬ ಬಗ್ಗೆ ಸಾರ್ವಜನಿಕರಿಂದ ಪ್ರಶ್ನೆ ಎದ್ದಿದೆ.

ಹೌದು..ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಅನೇಕ ಮದ್ಯದ ಅಂಗಡಿಗಳಿದ್ದು, ಯಾವ ಬಾರ್‌ ಅಂಡ್ ರೆಸ್ಟೋರೆಂಟ್ (bar)ಗಳಲ್ಲಿಯೂ ಬಿಲ್ ಕೊಡುತ್ತಿಲ್ಲ. ಬದಲಾಗಿ ಬಿಳಿ ಹಾಳೆ ಮೇಲೆ ಮದ್ಯದ ಬಿಲ್‌ನ್ನು ಕೊಡುತ್ತಿದ್ದಾರೆ. ಬಿಲ್ ಕೇಳಿದರೆ, ಮಷಿನ್ ಕೆಟ್ಟಿದೆ. ಪ್ರಿಂಟ್‌ ಬರೋದಿಲ್ಲ. ನಮ್ಮ ಬಳಿ ಬಿಲ್ ಕೊಡೋದಿಲ್ಲ ಎಂದು ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರು ಹೇಳುತ್ತಿದ್ದಾರೆ. ಈ ವಿಚಾರ ಸ್ಥಳೀಯ ಅಬಕಾರಿ ಇನ್ಸೆಪೆಕ್ಟರ್ ಗೆ ಗೊತ್ತಿದ್ದು, ವೌನವಹಿಸಿದ್ದಾರೆ. ಇನ್ನು ಅಬಕಾರಿ ಡಿಸಿ ಕೂಡ ವಿಷಯವೇ ಗೊತ್ತಿಲ್ಲದಂತೆ ಇರುವುದು ಯಾಕೆ ಎಂದು ಜನ ಚರ್ಚಿಸುತ್ತಿದ್ದಾರೆ.

ಮದ್ಯಪ್ರಿಯರು ಮದ್ಯ ಕೊಂಡ ಮೇಲೆ ಅಂಗಡಿ ಹೆಸರು ಇರುವ ಜಿಎಸ್ಟಿ (gst) ಬಿಲ್ ಕೊಡಬೇಕು, ಅಲ್ಲದೇ ಯಾವ ಮದ್ಯಕ್ಕೆ ಎಷ್ಟು ದರವೆಂದು ಬಿಲ್‌ನಲ್ಲಿ ನಮೂದಿಸಬೇಕು. ಅಬಕಾರಿ ಅಧಿಕಾರಿಗಳು ಕಾಲಕಾಲಕ್ಕೆ ತಕ್ಕಂತೆ ಇದನ್ನು ಪರಿಶೀಲಿಸಬೇಕು. ಆದರೆ ಅಬಕಾರಿ ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನಹರಿಸಿಲ್ಲ. ಇದು ಸಾರ್ವಜನಿಕರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಮದ್ಯ ಪ್ರಿಯರಿಯರಿಗೆ ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರು ಮಹಾ ಮೋಸ ಮಾಡಿ ವಸೂಲಿಗಿಳಿದಿದ್ದು, ಸಾಕಷ್ಟು ಹಣ ಗಳಿಸುತ್ತಿದ್ದು, ಬಿಲ್ ಕೊಡದೇ ಸರಕಾರಕ್ಕೆ ತೆರಿಗೆ ಕಟ್ಟದೇ ಮೋಸ ಮಾಡುತ್ತಿದ್ದಾರೆ.

ಅಧಿಕಾರಿಗಳ ಜಾಣ ಕುರುಡುತನಕ್ಕೆ ಭಾರೀ ಆಕ್ರೋಶ

ನಗರ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲ ಬಾರ್‌ ಅಂಡ್ ರೆಸ್ಟೋರೆಂಟ್ ಗಳಲ್ಲಿ ಇದೇ ಪರಿಸ್ಥಿತಿ ಇದ್ದು, ಎಂಆರ್ ಪಿ ದರದ ಮೇಲೆ ಶೇ.30ರಷ್ಟು ಒಂದು ಬಾಟಲ್ ಗೆ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡಿ ಮದ್ಯಪ್ರಿಯರಿಗೆ ಮಹಾ ಮೋಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಹೆಚ್ಚಿನ ದರಕ್ಕೆ ಮದ್ಯಮಾರಾಟದ ಹಿಂದೆ ಅಬಕಾರಿ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಆರೋಪ ಕೂಡ ಇದ್ದು, ಬಾರ್‌ ಅಂಡ್ ರೆಸ್ಟೊರೆಂಟ್ ನಲ್ಲಿ ಬಿಲ್ ಕೇಳಿದ್ರೆ ಮದ್ಯನೆ ಕೊಡಲ್ಲ ಎಂಬ ಆರೋಪ ಕೂಡ ಇದೆ. ಅದು ಅಲ್ಲದೇ ಈ ಎಲ್ಲ ಅಕ್ರಮಗಳಿಗೆ ಕಡಿವಾಣ ಹಾಕಲು ಅಬಕಾರಿ ಡಿಸಿ ಮನಸ್ಸು ಮಾಡುತ್ತಿಲ್ಲ. ಅಧಿಕಾರಿಗಳ ಜಾಣ ಕುರುಡುತನಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಇಂತಹ ಅಕ್ರಮಕ್ಕೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ನಾನಾ ಗ್ಯಾರಂಟಿ ಯೋಜನೆಗಳನ್ನು (guarantee scheme) ಜಾರಿಗೆ ತಂದಿರುವ ಸರಕಾರ ಯೋಜನೆಗಳಿಗೆ ಹಣ ಜೋಡಿಸಲು ಒದ್ದಾಡುತ್ತಿದ್ದರೆ, ಇತ್ತ ಅಬಕಾರಿ ಇಲಾಖೆ ಅಧಿಕಾರಿಗಳು ಸರಕಾರದ ಬೊಕ್ಕಸಕ್ಕೆ ಬರುವ ಆದಾಯಕ್ಕೆ ಕೊಕ್ಕೆ ಹಾಕಿದ್ದಾರೆ. ಅಲ್ಲದೇ ಕುಡುಕರ ಜೇಬಿಗೆ ಕತ್ತರಿ ಹಾಕುತ್ತಿರುವ ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರಿಂದ ಅಬಕಾರಿ ಇಲಾಖೆಗೆ ಕಮಿಷನ್ ಹೋಗ್ತಿದ್ಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ನೀತಿ ಸಂಹಿತೆ ಉಲ್ಲಂಘನೆ, ಅಬಕಾರಿ ಇಲಾಖೆಯಿಂದ 1.95 ಕೋಟಿ ಮೌಲ್ಯದ ಪದಾರ್ಥಗಳ ವಶ

ಹೆಚ್ಚುವರಿ ಹಣ

ಸಿಎಲ್ 2 ಬಾರ್‌ ಗಳಲ್ಲಿ ಡೇ ಅಂಡ್ ನೈಟ್ ಎಂ.ಆರ್.ಪಿ ದರಕ್ಕಿಂತ 30 ರಿಂದ 40 ರೂಪಾಯಿ ಹೆಚ್ಚುವರಿ ಹಣ ತೆಗೆದುಕೊಳ್ಳುತ್ತಿದ್ದಾರೆ. ಸಿಎಲ್2 ಬಾರ್‌ಗಳಲ್ಲಿ ಎಂ.ಆರ್.ಪಿ ಬೆಲೆಗೆ ಮದ್ಯ ಮಾರಾಟ ಮಾಡಬೇಕು ಎಂಬ ಕಾನೂನೂ ಇದೆ. ಆದ್ರೆ ಅದಕ್ಕೆ ಯಾರೂ ಕೂಡ ಕ್ಯಾರೆ ಅಂತಿಲ್ಲ. ಯಾವೊಂದು ನಿಯಮವನ್ನು ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರು ಪಾಲಿಸುತ್ತಿಲ್ಲ. ಅಬಕಾರಿ ಅಧಿಕಾರಿಗಳಿಗೆ ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರು ಕಮಿಷನ್ ಕೊಟ್ಟು ಎಲ್ಲಾ ಅಡ್ಜೆಸ್ಮೆಂಟ್ ಮಾಡಿಕೊಂಡು ದರ್ಬಾರ್ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಈ ಬಾರ್‌ ಗಳಲ್ಲಿ ಕೌಂಟರ್‌ನಲ್ಲಿ ಕುಡಿಯೋಕೋ ಅವಕಾಶ ಕೊಡ್ತಾರೆ. ಯಾವುದೇ ಬಿಲ್ ಕೊಡಲ್ಲ, ದರಪಟ್ಟಿ, ಸ್ವಚ್ಛತೆ ಅಂತೂ ಇಲ್ವೇ ಇಲ್ಲ. ಗ್ರಾಮೀಣ ಪ್ರದೇಶಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಾರೆ ಎಂಬ ಆರೋಪವೂ ಇದೆ. ಇತ್ತ ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರ ಜೊತೆ ಸೇರಿ ಅಧಿಕಾರಿಗಳು ಸಿಕ್ಕಿದ್ದೇ ಚಾನ್ಸ್ ಅಂತಾ ಸಿಕ್ಕಾಪಟ್ಟೆ ಲೂಟಿ ಮಾಡುತ್ತಿದ್ದಾರೆ. ಇನ್ನು ಮನಸ್ಸಿಗೆ ಬಂದಂತೆ ಮದ್ಯ ಮಾರುತ್ತಿದ್ರೂ ಹೇಳೋರು ಕೇಳೋರು ಯಾರು ಇಲ್ಲ ಎಂದು ಬುದ್ದಿಜೀವಿಗಳು ಅಸಮಾಧಾನ ಹೊರ ಹಾಕಿದ್ದಾರೆ.

ಅಬಕಾರಿ ನಿಯಮಮಗಳು ಏನು ಹೇಳುತ್ತದೆ.
*ಅಬಕಾರಿ ನಿಯಮದ ಪ್ರಕಾರ ಪ್ರತಿ ಮದ್ಯದ ಅಂಗಡಿ ಹಾಗೂ ಬಾರ್‌ಗಳಲ್ಲಿ ಕಂಪ್ಯೂಟರ್ ಮುದ್ರಿತ ಅಧಿಕೃತ ಜಿಎಸ್ಟಿ ಬಿಲ್‌ನ್ನು ಗ್ರಾಹಕರಿಗೆ ಕೊಡಬೇಕು.
*ಅಬಕಾರಿ ಅಧಿಕಾರಿಗಳು ಪ್ರತಿ ದಿನ ಮದ್ಯದ ಸೇಲ್ ಬಗ್ಗೆ ಲಾಗ್ ಬುಕ್ ಮೆಂಟೇನ್ ಮಾಡಬೇಕು, ಅಂಗಡಿಯಲ್ಲಿ ಮದ್ಯ ಸ್ಟಾಕ್ ಎಷ್ಟಿದೆ, ಎಷ್ಟು ಖರ್ಚಾಗಿದೆ ಎಂದು ಲೆಕ್ಕ ನೋಡಬೇಕು
*ಮದ್ಯದ ಅಂಗಡಿಗಳಿಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಆಗಾಗ ಪರಿಶೀಲನೆ ನಡೆಸಬೇಕು
*ಕೌಂಟರ್‌ನಲ್ಲಿ ಕುಡಿಯಲು ಅವಕಾಶವಿಲ್ಲ, ಆದರೆ ದಾವಣಗೆರೆಯ ಬಹುತೇಕ ಬಾರ್‌ಗಳಲ್ಲಿ ಕೌಂಟರ್‌ನಲ್ಲಿಯೇ ಜನ ಕುಡಿಯುತ್ತಿದ್ದಾರೆ.
*ಮದ್ಯ ಹಾಗೂ ಬಾರ್ ಗಳಲ್ಲಿ ಮದ್ಯ ತೆಗೆದುಕೊಂಡಾಗ ಬಿಲ್ ಕೊಡಬೇಕಾದದ್ದು ಬಾರ್ ಮಾಲೀಕನ ಕರ್ತವ್ಯ
*ಅಬಕಾರಿ ಅಧಿಕಾರಿಗಳು ಬಾರ್ ಮಾಲೀಕರ ಜತೆ ಶಾಮೀಲು ಆಗಿರುವ ಶಂಕೆ
*ಬಿಲ್‌ನೀಡಿದರೆ ಗ್ರಾಹಕರ ಜತೆ ಜಗಳ, ಹಾಗೂ ಅಬಕಾರಿ ಅಧಿಕಾರಿಗಳಿಗೆ ಲೆಕ್ಕ ಕೊಡಬೇಕೆಂದು ಬಾರ್ ಮಾಲೀಕರು ಬಿಲ್ ನೀಡುತ್ತಿಲ್ಲ
*ಅಬಕಾರಿ ಡಿಸಿ ಈ ಬಗ್ಗೆ ಗಮನಹರಿಸಬೇಕಿದ್ದು, ಅವರೇ ಇದರಲ್ಲಿ ಶಾಮೀಲು ಆಗಿದ್ದಾರಾ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಮಾಡುತ್ತಿದ್ದಾರೆ.
*ಸರಕಾರದ್ದೇ ಆದ ಎಂಎಸ್‌ಐಎಲ್‌ msil ನಲ್ಲಿಯೂ ಬಿಲ್ ನೀಡುತ್ತಿಲ್ಲ
*ಸಿಎಲ್‌ಟೂ ಮದ್ಯದ ಅಂಗಡಿಯಲ್ಲಿ ಕುಡಿಯಲು ಅವಕಾಶವಿಲ್ಲ.

ಒಟ್ಟಾರೆ ಅಬಕಾರಿ ನಿಯಮದ ಪ್ರಕಾರ ಎಂ ಆರ್ ಪಿ MRP ಗಿಂತ ಹೆಚ್ಚಿನ ಬೆಲೆಯನ್ನು ಗ್ರಾಹಕರಿಂದ ಪಡೆಯಬಾರದು. ಇಂತಹ ಸನ್ನಿವೇಶ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕೆಲಸ. ಆದರೆ ಈ ಎಚ್ಚರಿಕೆಯನ್ನು ಕೇರ್ ಮಾಡದ ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರು, ಸಿಕ್ಕಿದ್ದೇ ಚಾನ್ಸ್ ಎಂದು ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕುತ್ತಿದ್ದು, ಇನ್ನಾದ್ರೂ ಅಬಕಾರಿ ಡಿಸಿ ಈ ಬಗ್ಗೆ ಗಮನಹರಿಸಿ ಸರಕಾರದ ಆದಾಯಕ್ಕೆ ಸಹಾಯ ಮಾಡುತ್ತಾರಾ ಅಥವಾ ಬಾರ್ ಮಾಲೀಕರ ಅಕ್ರಮಕ್ಕೆ ಸಾಥ್ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

error: Content is protected !!