ಎಕ್ಸಿಟ್ ಪೋಲ್ ಹೇಳಿದ್ದೆಲ್ಲಾ ಸತ್ಯವಾಗಲ್ಲ: ಸಂಪೂರ್ಣ ಬಹುಮತ ಬಿಜೆಪಿಗೆ ಎಂದ ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ : ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಿನ್ನೆ ನಡೆದಿದ್ದು ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ.. ಇದಕ್ಕೂ ಮೊದಲು ಹಲವಾರು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ಮುಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಎಕ್ಸಿಟ್ ಪೋಲ್ ಹೇಳಿದ್ದೆಲ್ಲಾ ಸತ್ಯವಾಗಲ್ಲ ಎಂದಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್ ಪರವೇ ಹೇಳಿದ್ದವು. ಕಾಂಗ್ರೆಸ್ ಹೆಚ್ಚಿನ ಸ್ಥಾನ ಕೊಟ್ಟಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರಖುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ನನ್ನ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಮಾಡಿದರು. ಅದು ನಿನ್ನೆಗೆ ಮುಗಿದಿದೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ. ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.