ಚಿಕ್ಕೋಡಿ ಚಿಂಚಣಿ ಸಿದ್ದಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಶ್ರೀಗಳು ಲಿಂಗೈಕ್ಯ

Allama Prabhu Swamiji Lingaikya of Chikkodi Chinchani Siddhaprabhu Sansthan Math

ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಾಸ್ವಾಮೀಜಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದ ಶೋಕಸಾಗರದಲ್ಲಿ ಮುಳುಗಿದೆ.

ಗಡಿ ಭಾಗದಲ್ಲಿ ಕನ್ನಡದ ಮಠ, ಕನ್ನಡದ ಸ್ವಾಮೀಜಿ ಎಂದೇ ಚಿಂಚಣಿ ಶ್ರೀಗಳು ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿ ಅವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಕೆಲ ದಿನಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅಗಲಿಕೆಯಿಂದ ಸಾವಿರಾರು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಇಂದೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಸಿಕ್ಕಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!