ಅಲ್ಪಸಂಖ್ಯಾತರ ಉದ್ಯೋಗಸ್ಥ ಮಹಿಳಾ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುವ ಮಹಿಳೆಯರ ಸುರಕ್ಷತೆಯ ಹಿತದೃಷ್ಟಿಯಿಂದ ಉದ್ಯೋಗಸ್ಥ ಮಹಿಳಾ ವಸತಿನಿಲಯವನ್ನು ನಗರದ ಕುಂದುವಾಡ ರಸ್ತೆಯಲ್ಲಿರುವ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡದಲ್ಲಿ ಪ್ರಾರಂಭಿಸಿದ್ದು, ವಸತಿನಿಲಯ ಪ್ರವೇಶಕ್ಕಾಗಿ ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.
ಈ ವಸತಿನಿಲಯದಲ್ಲಿ ಉಚಿತವಾಗಿ ಮೂಲಭೂತ ಸೌಕರ್ಯ ಮತ್ತು ವಸತಿ ನೀಡಲಾಗುವುದು. ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ಜನಾಂಗದ ಆಸಕ್ತಿಯುಳ್ಳ ಹಾಗೂ ಅರ್ಹ ಅಲ್ಪಸಂಖ್ಯಾತರ ಉದ್ಯೋಗ್ಥ ಮಹಿಳೆಯರು ಸೆ. 15 ರೊಳಗಾಗಿ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡರಸ್ತೆ, ದಾವಣಗೆರೆ-8861042302 ಇಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂರವಾಣಿ :08192-250022 ಕ್ಕೆ ಸಂಪರ್ಕಿಸಬಹುದೆAದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.