ಅಮಿತ್ ಶಾ ಸಿಎಂ ಬಸವರಾಜ ಬೊಮ್ಮಾಯಿ ರಿಂದ ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ,ವಸತಿ ಗೃಹ ಉದ್ಘಾಟನೆ

IMG-20210902-WA0007

 

ದಾವಣಗೆರೆ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಭೇರತಿ ಬಸವರಾಜ ಸೇರಿದಂತೆ ಗಣ್ಯಾತಿಗಣ್ಯರಿಂದ ಗಾಂಧಿ ಭವನ, ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಪೊಲೀಸ್ ವಸತಿ ಗೃಹ ಸಮುಚ್ಚಯದ ಉದ್ಘಾಟನೆ ಗುರುವಾರದಂದು ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ನೆರವೇರಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 03 ಕೋಟಿ ರೂ. ವೆಚ್ಚದಲ್ಲಿ ದಾವಣಗೆರೆಯಲ್ಲಿ ನಿರ್ಮಿಸಲಾಗಿರುವ ಗಾಂಧಿ ಭವನ, ಪೊಲೀಸ್ ಇಲಾಖೆಯಿಂದ ಕೊಂಡಜ್ಜಿ ಬಳಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿ ಗಳಿಗಾಗಿ 14.91 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ವಸತಿಗೃಹ ಸಮುಚ್ಚಯದ ಉದ್ಘಾಟನೆ ನಗರದ ಜಿಎಂಐಟಿ ಆವರಣದಲ್ಲಿ ನೆರವೇರಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗಾಂಧೀಜಿ ಅವರ ಜೀವನಾದರ್ಶಗಳು, ಮೌಲ್ಯಗಳನ್ನು ಇಂದಿನ ಯುವ ಪೀಳಿಗೆಗೆ ಪ್ರಚುರ ಪಡಿಸುವ ನಿಟ್ಟಿನಲ್ಲಿ ದಾವಣಗೆರೆ ನಗರದಲ್ಲಿ ಸುಮಾರು 01 ಎಕರೆ ಪ್ರದೇಶದಲ್ಲಿ ನೂತನವಾಗಿ ಗಾಂಧಿ ಭವನ ನಿರ್ಮಿಸಲಾಗಿದ್ದು, ನಿರ್ಮಿತಿ ಕೇಂದ್ರ ಆಕರ್ಷಕವಾಗಿ ಗಾಂಧಿ ಭವನ ನಿರ್ಮಾಣ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ, ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಅವರು ಉಪಸ್ಥಿತರಿದ್ದರು. ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಕೆ. ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಪ್ರೊ. ಎನ್. ಲಿಂಗಣ್ಣ, ಎಂ.ಪಿ. ರೇಣುಕಾಚಾರ್ಯ, ಎಂ. ರಾಮಪ್ಪ, ಕರುಣಾಕರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಮೋಹನ್‍ಕುಮಾರ್ ಕೊಂಡಜ್ಜಿ, ಎನ್. ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ. ಪಿ.ಎಸ್. ಹರ್ಷ, ಡಿಸಿ ಮಹಾಂತೇಶ್ ಬೀಳಗಿ, ಜಿಪಂ ಸಿಇಒ ವಿಜಯ ಮಹಾಂತೇಶ್, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸ್ವಾತಂತ್ರ್ಯ ಹೋರಾಟಗಾರ ರಾದ ಶಿವಲಿಂಗಸ್ವಾಮಿ, ಮರುಳಸಿದ್ದಪ್ಪ, ತಿರುವಳಿಶೆಟ್ಟರ, ಸಿದ್ರಾಮಪ್ಪ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

error: Content is protected !!