Amith Sha: ಕೇಂದ್ರ ಗೃಹ ಸಚಿವ ಅಮಿತ್ ಶಾ ರಿಂದ ಜಿ ಎಂ ಐ ಟಿ ಯಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

IMG-20210901-WA0005

 

ದಾವಣಗೆರೆ: ಇಲ್ಲಿನ ಜಿ.ಎಂ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೆ.2 ರ ರಂದು ಅಂದಾಜು 10.50 ಕೋಟಿ ವೇಚದಲ್ಲಿ ನಿರ್ಮಿಸಿರುವ ಜಿ.ಎಂ. ಕೇಂದ್ರ ಗ್ರಂಥಾಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಎಂಐಟಿ ಕಾಲೇಜು ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾಲೇಜಿನ ಆವರಣದಲ್ಲಿ 75 ಸಾವಿರ ಚದರಡಿ ಪ್ರದೇಶದಲ್ಲಿ ಸುಮಾರು 10.5 ಕೋಟಿ ರೂ.ವೆಚ್ಚದಲ್ಲಿ 4 ಅಂತಸ್ತುಗಳ ಗ್ರಂಥಾಲಯ ಕಟ್ಟಡ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಂದು ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೂತನ ಗ್ರಂಥಾಲಯ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ‌, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಚಿವ ಮುರುಗೇಶ್ ನಿರಾಣಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಗ್ರಂಥಾಲಯವು 150 ಜನರ ಸಾಮರ್ಥ್ಯವುಳ್ಳ ಆಡಿಯೋ ಮತ್ತು ವಿಡಿಯೋ ಕೊಠಡಿ ಹಾಗೂ ವಿಚಾರ ಸಂಕಿರಣ ಕೊಠಡಿಗಳನ್ನು ಹೊಂದಿದ್ದು, ಸುಮಾರು 29 ಸಾವಿರ ಪುಸ್ತಕಗಳು ಇಲ್ಲಿ ಲಭ್ಯವಿದೆ. ನಗರದ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್‌ಡಿ ಪದವಿ ವಿದ್ಯಾರ್ಥಿಗಳು ಗ್ರಂಥಾಲಯದ ಸೌಲಭ್ಯ ಪಡೆದುಕೊಳ್ಳಬಹುದು ಎಂದರು.

ಡಾ.ಎಂ.ಕೆ.ಬಕ್ಕಪ್ಪ, ತೇಜಸ್ವಿ ಕಟ್ಟೀಮನಿ, ಶಶಿಕುಮಾರ್ ಗೋಷ್ಠಿಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!