ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕಕ್ಕೆ ಬರಿಗೈ

ಬೆಂಗಳೂರು, ಫೆಬ್ರವರಿ 11: ಕೇಂದ್ರ ¸ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನೈತಿಕ ಹಕ್ಕಿಲ್ಲ

ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ ಕೇಂದ್ರ ಸರ್ಕಾರದವರು ಅನುಮತಿ ನೀಡದೇ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದರು.

ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು

ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗ ಅವರು ಅವರ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದ ದೇವೇಗೌಡರು ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು, ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದರು.

ಕರ್ನಾಟಕಕ್ಕೆ ಬರಿಗೈ ಕರ್ನಾಟಕಕ್ಕೆ ಬರಿಗೈ

ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಗೆಲ್ಲಲಿದೆ

ಚುನಾವಣೆ ರಣಕಹಳೆ ಮೈಸೂರಿನಿಂದಲೇ ಅಮಿತ್ ಶಾ ಮೊಳಗಿಸುತ್ತಿರುವ ಬಗ್ಗೆ ಮಾತನಾಡಿ ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಾಣಿಜ್ಯ ಸಂಸ್ಥೆ ಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ , ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ , ಎಫ್.ಕೆ.ಸಿ.ಸಿ.ಐ, ಕಾಸ್ಸಿಯಾ, ಜಿ.ಎಸ್.ಟಿ ಸಮಿತಿ , ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂತೆ ಹಲವು ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳು  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!