Amruth Grama Yojane: ಅಮೃತ ಗ್ರಾಮ ಪಂಚಾಯತಿ ಯೊಜನೆbಉದ್ಘಾಟಿಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಬೆಂಗಳೂರು: ಗ್ರಾಮಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಘೋಷಿಸಲಾಗಿದ್ದ ಅಮೃತ ಗ್ರಾಮ ಪಂಚಾಯತಿ ಯೊಜನೆಯನ್ನು ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಉದ್ಘಾಟಿಸಲಾಯಿತು.
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಅವರು ಉದ್ಘಾಟನೆ ನೆರವೇರಿಸಿದರು. ಯೋಜನೆಗೆ ಅಧಿಕೃತ ಚಾಲನೆ ನೀಡಿದರು.
ಈ ಯೋಜನೆಯಲ್ಲಿ ರಾಜ್ಯದ 750 ಗ್ರಾಪಂಗಳು ಆಯ್ಕೆಯಾಗಿದ್ದು, ಈ ಎಲ್ಲಾ ಗ್ರಾಮಗಳ ಪಂಚಾಯತಿಳ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚುವರಿಯಾಗಿ 25 ಲಕ್ಷ ರೂ., ಅನುದಾನ ಸಿಗಲಿದ್ದು, ಗ್ರಾಪಂ ಅಧ್ಯಕ್ಷರು ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದರು.
ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಸಚಿವರುಗಳಾದ ಡಾ. ಅಶ್ವಥ್ ನಾರಾಯಣ, ಎಸ್.ಟಿ ಸೊಮಶೇಖರ್, ಮುನಿರತ್ನ, ನಾಗೇಶ್, ಶಾಸಕರುಗಳು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.