ಚಾರ್ಜ್‌ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ

ಚಾರ್ಜ್‌ಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ
ಮಂಡ್ಯ: ಮನೆಯಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಇದಕ್ಕಿದ್ದ ಹಾಗೇ ಸ್ಫೋಟಗೊಂಡಿದೆ. ಇದರಿಂದ ಮನೆಯಲ್ಲಿದ್ದ 5 ಲಕ್ಷ ರೂಪಾಯಿಗೂ ಹೆಚ್ಚಿನ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಇದಕ್ಕಿದ್ದ ಹಾಗೇ ಸ್ಫೋಟಗೊಂಡಿದೆ. ಇದರಿಂದ ಮನೆಯಲ್ಲಿದ್ದ 5 ಲಕ್ಷ ರೂಪಾಯಿಗೂ ಹೆಚ್ಚಿನ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿದೆ.
ವಳಗೆರೆಹಳ್ಳಿ ನಿವಾಸಿ ಮುತ್ತುರಾಜ್ ಎಂಬುವರಿಗೆ ಸೇರಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಕರಕಲಾಗಿದೆ. ಕಳೆದ 6 ತಿಂಗಳ ಹಿಂದಷ್ಟೆ ಮದ್ದೂರಿನಲ್ಲಿ E-ROUTE ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ್ದರು. ಮನೆಯಲ್ಲಿ ಸ್ಕೂಟರ್ ಚಾರ್ಜ್ ಗೆ ಹಾಕಿದ್ದ ಸ್ಚಲ್ಪ ಹೊತ್ತಿನಲ್ಲೇ ಸ್ಟೋಟವಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಕಿಟಕಿ ಗಾಜು ಸ್ಫೋಟಗೊಂಡು, ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ವಾಶಿಂಗ್ ಮಿಷನ್ ಎಲ್ಲವೂ ಸುಟ್ಟು ಭಸ್ಮವಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಧವಸ ಧಾನ್ಯಗಳು ನಾಶವಾಗಿದೆ. ಸ್ಥಳಕ್ಕೆ ಅಗ್ನಿಶಾಂಕ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
