ರಾಜ್ಯಪಾಲ ಥಾವರ್ಚಾಂದ್ ಗೆಹಲೋತ್ ರಿಂದ ಮಹತ್ವದ ಘೋಷಣೆ.!

ಬೆಂಗಳೂರು: 1 ಸಾವಿರ ಕೋಟಿ ರೂ. ವೆಚ್ಚದಲ್ಲಿ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮುಂದಿನ ಎರಡು ವರ್ಷಗಳಲ್ಲಿ ಮೇಲ್ಜರ್ಜೆಗೇರಿಸಲಾಗುವುದು ಎಂದು ರಾಜ್ಯಪಾಲ ಥಾವರ್ಚಾಂದ್ ಗೆಹಲೋತ್ ಹೇಳಿದ್ದಾರೆ.
ಗಣರಾಜ್ಯೋತ್ಸವ ಭಾಷಣದಲ್ಲಿ ಮಾತನಾಡಿದ ಅವರು, ಮರು ಜಾರಿಗೊಳಿಸಿರುವ ‘ಯಶಸ್ವಿನಿ’ ಯೋಜನೆ ಅಡಿಯಲ್ಲಿ 2023ರ ಜ.17ರ ಅಂತ್ಯಕ್ಕೆ 32.32 ಲಕ್ಷ ಸದಸ್ಯರನ್ನು ನೋಂದಾಯಿಸಲಾಗಿದೆ ಎಂದು ವಿವರಿಸಿದರು.
ಬಾಲ್ಯ ವಿವಾಹ ತಡೆಗಟ್ಟುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಸ್ಫೂರ್ತಿ ಯೋಜನೆಯನ್ನು ಬಾಗಲಕೋಟೆ, ವಿಜಯಪುರ, ರಾಯಚೂರು, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳ 11 ತಾಲ್ಲೂಕುಗಳಿಗೂ ವಿಸ್ತರಿಸಲಾಗುವುದು. ಈ ಯೋಜನೆಗೆ 12.51 ಕೋಟಿ ರೂ ವೆಚ್ಚದಲ್ಲಿ ಮೀಸಲಿಡಲಾಗುವುದು ಎಂದು ರಾಜ್ಯಪಾಲರು ತಿಳಿಸಿದರು.
ಕೃಷಿ, ತೋಟಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ರಾಜ್ಯ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ತಮ್ಮ ಭಾಷಣದಲ್ಲಿ ಪ್ರಸ್ತುತ ಪಡಿಸಿದರು.