ಕುಷ್ಠರೋಗಿಗಳಿಗೆ ಸಮಾಜದ ಮುಖ್ಯವಾಹಿನಿಗೆ ಅವಕಾಶ-ಡಾ.ವೆಂಕಟೇಶ್
ದಾವಣಗೆರೆ : ಕುಷ್ಟರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ ಕುಷ್ಟ ರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ನೀಡೋಣ ಎಂದು ಹಿರಿಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್ ಎಲ್.ಡಿ. ಹೇಳಿದರು.
ಜ.30ರಂದು ಕಕ್ಕರಗೊಳ್ಳದಲ್ಲಿ ವಿಶ್ವ ಕುಷ್ಟರೋಗ ದಿನ ಆಚರಣೆಯ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು ತಿಳಿ ಬಿಳಿ ಅಥವಾ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ /ಮಚ್ಚೆಗಳು ಕಂಡು ಬಂದಲ್ಲಿ ಕೂಡಲೇ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಿ. ಭಯ ಬೇಡ ಕುಷ್ಟರೋಗ ಸಂಪೂರ್ಣ ಗುಣಮುಖ ಹೂಂದುವ ಕಾಯಿಲೆ. ಬಹು ವಿಧ ಔಷಧಿ ಚಿಕಿತ್ಸೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ.
ಕುಷ್ಟರೋಗದ ಕುರಿತು ಕರಪತ್ರಗಳನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸತ್ಯಮ್ಮ ಹಾಗೂ ಉಪಾಧ್ಯಕ್ಷರಾದ ಆಶಾ ಸಿ. ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳು ಬಿಡುಗಡೆಗೊಳಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು. ವಿವಿಧ ಇಲಾಖೆಯ ಅಧಿಕಾರಿಗಳು. ಆರೋಗ್ಯ ಸಿಬ್ಬಂದಿಯವರು. ಆಶಾ ಕಾರ್ಯಕರ್ತರು ಇದ್ದರು.