ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಮತ್ತೊಂದು ಪ್ರಕರಣ

Another case of a woman urinating on a plane

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.
ಪಾನಮತ್ತನಾಗಿದ್ದ ಪುರುಷ ಪ್ರಯಾಣಿಕ ಮಹಿಳೆಯ ಕಂಬಳಿ ಮೇಲೆ ಮೂತ್ರ ವಿಸರ್ಜನೆಯ ಕೃತ್ಯ ಎಸಗಿದ್ದ. ಈ ಬಗ್ಗೆ ಮಹಿಳೆ ಮೊದಲು ದೂರು ನೀಡಿದ್ದರು. ಆದರೆ, ಪೊಲೀಸರಲ್ಲಿ ಪ್ರಕರಣ ದಾಖಲಿಸಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಬಿಟ್ಟು ಕಳಿಸಲಾಗಿತ್ತು ಎಂದು ಏರ್ ಇಂಡಿಯಾ ಹೇಳಿದೆ.
ಈ ಹಿಂದೆ ನವೆಂಬರ್ 26ರಂದು ನ್ಯೂಯಾರ್ಕ್ – ದೆಹಲಿ ನಡುವಿನ ಏರ್ ಇಂಡಿಯಾ ವಿಮಾನದಲ್ಲಿ ನಡೆದ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಡಿಸೆಂಬರ್ 6ರಂದು ಏರ್ ಇಂಡಿಯಾದ ಪ್ಯಾರಿಸ್ – ದೆಹಲಿ ವಿಮಾನದಲ್ಲಿ ಮತ್ತೊಂದು ಘಟನೆ ನಡೆದಿತ್ತು. ನಂತರ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!