ದಾವಣಗೆರೆ: ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜುಲೈ 31 ರಂದು ಬೆಳಿಗ್ಗೆ 10.30 ಗಂಟೆಗೆ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೋಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಕಾರ್ಯಾಗಾರವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್. ಬಿ ಇಟ್ನಾಳ್. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಮಹಾವೀರ್.ಎಂ. ಕರೆಣ್ಣವರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ ಕೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್.ಜಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಸದಸ್ಯೆ ಅಪರ್ಣಾ ಎಂ. ಕೊಳ್ಳಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮಾನಾಯ್ಕ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್.ಎಲ್.ಹೆಚ್, ಮಾ.ಕ.ಸಾ., ನೋಡಲ್ ಅಧಿಕಾರಿಗಳು ಮತ್ತು ಪಿ.ಐ.ಮಹಿಳಾ ಠಾಣೆ, ಶ್ರೀಮತಿ ಮಲ್ಲಮ್ಮಚೌಬೆ, ಡಾನ್ ಬಾಸ್ಕೋ ಸಂಸ್ಥೆ ನಿರ್ದೇಶಕ ಫಾ. ರೆಜಿ ಜೇಕಬ್, ಆರ್.ಎಲ್ ಲಾ ಕಾಲೇಜ್ ಪ್ರಾಂಶುಪಾಲರು ಡಾ.ಜಿ.ಎಸ್.ಯತೀಶ್ ಭಾಗವಹಿಸುವರು.
