ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್

ದಾವಣಗೆರೆ: ರಾಜ್ಯ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆ ನಾಪತ್ತೆಯಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಬಳಿ ಟೋಲ್‌ಗೆಟ್ ಬಳಿ ಶಾಸಕ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿದೆ.
ಬಂಧನ ಭೀತಿ ಎದುರಾಗುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಲೋಕಾಯುಕ್ತ ಪೊಲೀಸರಿಂದ ಬಂಧನ ಭೀತಿ ಹಿನ್ನಲೆ ಅಜ್ಞಾತ ಸ್ಥಳಕ್ಕೆ ಸಕ ಮಾಡಾಳ್ ವಿರೂಪಾಕ್ಷಪ್ಪ ಹೊರಟಿದ್ದರು.
ತಮ್ಮ ಪುತ್ರ ಮಾಡಾಳ್ ಪ್ರಶಾಂತ್ ಸುಮಾರು 6 ಕೋಟಿ ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರ ಕೈಯಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದ.
ಇದೇ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಪಡೆದಿದ್ದರು. ಇದೀಗ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.