ಎಸ್ ಎಸ್ ಮಲ್ಲಿಕಾರ್ಜುನ್ ಗೆ ಸಿಕ್ತು ನಿರೀಕ್ಷಣಾ ಜಾಮೀನು

ದಾವಣಗೆರೆ: ಶ್ರೀ ಕಲ್ಲೇಶ್ವರ ರೈಸ್ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ ಅವರಿಗೆ ನಿರೀಕ್ಷಣಾ ಜಾಮೀನು ದೊರೆತಿದೆ.
ನಿರೀಕ್ಷಣಾ ಜಾಮೀನು ಕೋರಿ ಮಲ್ಲಿಕಾರ್ಜುನ್ ಇತ್ತೀಚೆಗೆ ನ್ಯಾಯಾಲಯದ ಮೊರೆ ಹೋಗಿದ್ದರು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಎಸ್ಸೆಸ್ಸೆಂ ಸೇರಿ ಮೂರು ಜನರಕ್ಕೆ ನಿರೀಕ್ಷಣಾ ಜಾಮೀನು ನೀಡಿ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ
ಮಲ್ಲಿಕಾರ್ಜುನ ಪರ ನ್ಯಾಯವಾದಿ ಪ್ರಕಾಶ ಪಾಟೀಲ್ ಹಾಗೂ ಸಂಪಣ್ಣ ಮತ್ತು ಕರಿಬಸಯ್ಯ ಪರ ನ್ಯಾಯವಾದಿ ರಾಮದಾಸ್ ವಾದ ಮಂಡನೆ ಮಾಡಿದ್ದರು. ವಾದಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಮೀನು ಮುಂಜೂರು ಮಾಡಿದೆ. 2022 ಡಿ. 21 ರಂದು ದಾವಣಗೆರೆ ನಗರದ ಆನೆಕೊಂಡದ ಬಳಿ ಇರುವ ಕಲ್ಲೇಶ್ವರ ರೈಸ್ ಮಿಲ್ ಮೇಲೆ ಅರಣ್ಯ ಇಲಾಖೆ ಹಾಗೂ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ವನ್ಯ ಮೃಗಗಳು ಪತ್ತೆ ಹಿನ್ನೆಲೆ ಅರಣ್ಯ ಇಲಾಖೆ ದೂರು ದಾಖಲಿಸಿತ್ತು.