application; ಶೈಕ್ಷಣಿಕ ಶುಲ್ಕ ಮರುಪಾವತಿಸಲು ಅರ್ಜಿ

ದಾವಣಗೆರೆ, ಆ. 19: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಂದ 2023-24ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಜಿ (application) ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿನ ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಸಲ್ಲಿಸಬೇಕು.

Application; ಪಾಲಿಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ, 08192237480 ಸಂಪರ್ಕಿಸಲು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!