ರಾಜ್ಯ ಕ್ರೀಡಾಪಟುಗಳಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020ನೇ ಸಾಲಿನ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರಿಡಾಪಟುಗಳು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ರಾಜ್ಯದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಲಂಪಿಕ್ ಗೇಮ್ಸ್, ಏಷಿಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್, ವರ್ಲ್ಡ್ ಕಪ್/ಚಾಂಪಿಯನ್ ಷಿಪ್ (ಭಾರತ ಸರ್ಕಾರದಿಂದ ಅಂಗೀಕೃತವಾದ ಭಾರತ ತಂಡದ ಭಾಗವಾಗಿ ಪ್ರತಿನಿಧಿಸಿರಬೇಕು), ನ್ಯಾಷನಲ್ ಗೇಮ್ಸ್ (ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಕ್ರೀಡೆಗಳು), ನ್ಯಾಷನಲ್ ಚಾಂಪಿಯನ್‌ಶಿಪ್ (ಒಲಂಪಿಕ್ ಕ್ರೀಡೆಗಳಿಗೆ ಮಾತ್ರ), ಜ್ಯೂನಿಯರ್ ನ್ಯಾಷನಲ್ (ಒಲಂಪಿಕ್ ಕ್ರೀಡೆಗಳಿಗೆ ಮಾತ್ರ), ಸಬ್ ಜ್ಯೂನಿಯರ್ ನ್ಯಾಷನಲ್ (ಒಲಂಪಿಕ್ ಕ್ರೀಡೆಗಳಿಗೆ ಮಾತ್ರ) ಕ್ರೀಡಾಕೂಟದಲ್ಲಿ ಪದಕ ಪಡೆದಿರುವ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಕ್ರೀಡಾಪಟುಗಳು ಆ.28 ರೊಳಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಭರ್ತಿ ಮಾಡಿದ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08192-237480 ಕ್ಕೆ ಸಂಪರ್ಕಿಸಬಹುದು.