ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ

ದಾವಣಗೆರೆ :ಡಿ.31 (ಕರ್ನಾಟಕ ವಾರ್ತೆ)- 2022-23ನೇ ಸಾಲಿನ ವಿಕಲಚೇತನ ವಿದ್ಯಾರ್ಥಿಗಳು ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿವೇತನವನ್ನು ಆನ್‍ಲೈನ್ ಮೂಲಕ ಶಾಲಾ/ಕಾಲೇಜುಗಳ ನೋಂದಣಿ ಸಂಖ್ಯೆ ಹಾಗೂ ಯು.ಡಿ.ಐ.ಡಿ ಸಂಖ್ಯೆಗಳ ಮೂಲಕ ಫಲಾನುಭವಿಯು ಹೊಂದಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ನಮೂದಿಸಿ  ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ: hಣಣಠಿs:// ssp.postmatric.karnataka.gov.in/ & https://ssp.prematric.karnataka.gov.in/ನ್ನು ವೀಕ್ಷಿಸಬಹುದು ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!