ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6ನೇ ತರಗತಿಯಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ.10,000 ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.
2021-22ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ : hಣಣಠಿ://seಡಿviಛಿeoಟಿಟiಟಿe.gov.iಟಿ/ಞಚಿಡಿಟಿಚಿಣಚಿಞಚಿ ಮೂಲಕ ಆನ್‌ಲೈನ್‌ನಲ್ಲಿ ಜೂ.30 ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08192-237480 ಸಂಪರ್ಕಿಸಬಹುದೆ0ದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತ ನೆಲವಿಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!