ಪಾರಂಪರಿಕ ಕಲೆಗಳ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತದಲ್ಲಿ 4 ವರ್ಷಗಳ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯನ್ನು ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮೇ 31 ರೊಳಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnatakaka.gov.in ಹಾಗೂ ಸಹಾಯವಾಣಿ ಸಂಖ್ಯೆ 8050770004 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
                         
                       
                       
                       
                       
                       
                       
                      