HAL ಬೆಂಗಳೂರು ವತಿಯಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ
ದಾವಣಗೆರೆ; ಹೆಚ್.ಎ.ಎಲ್, ಬೆಂಗಳೂರು ವತಿಯಿಂದ ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಟರ್, ಸಿ.ಒಪಿ.ಎ, ಫೌಂಡ್ರಿಮನ್ ಮತ್ತು ಶೀಟ್ ಮೆಟಲ್ ವರ್ಕರ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆಯನ್ನು ಜಿಲ್ಲಾಡಳಿತ ಭವನ, 1ನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ, ಆಗಸ್ಟ್ 28 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳು www.apprenticeshipindia.org ವೆಬ್ಸೈಟ್ನಲ್ಲಿ ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ ದೂ.ಸಂ. 7406323294 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.