ಲೋಕಲ್ ಸುದ್ದಿ

ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ 06 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಆರ್.ಸಿ.ಐ ನಿಯಮದಂತೆ ವಿಶೇಷ ಡಿ.ಇಡಿ ಮತ್ತು ವಿಶೇಷ ಬಿ.ಇಡಿ ಪದವಿಯ ವಿದ್ಯಾರ್ಹತೆ ಹೊಂದಿರುವವರನ್ನು 2023-24ನೇ ಸಾಲಿಗೆ ‘‘ನೇರಗುತ್ತಿಗೆ ಮೂಲಕ ತಾತ್ಕಾಲಿಕ ಆಯ್ಕೆ’’ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು ಮತ್ತು ಆರ್.ಸಿ.ಐ ನೊಂದಣಿ (2023-24ನೇ ಸಾಲಿಗೆ) ಪ್ರಮಾಣ ಪತ್ರದೊಂದಿಗೆ ಸ್ವವಿವರವುಳ್ಳ ಮಾಹಿತಿಯನ್ನು ಜೂನ್.14ರಂದು ಸಂಜೆ 05ಗಂಟೆಯೊಳಗೆ ಅಂಚೆ ಅಥವಾ ನೇರವಾಗಿ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಅಂಬೇಡ್ಕರ್ ವೃತ್ತ  ದಾವಣಗೆರೆ ಇಲ್ಲಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.9448999394 ಮತ್ತು 08192-296445 ಸಂಪರ್ಕಿಸಲು ಕೋರಲಾಗಿದೆ.

Click to comment

Leave a Reply

Your email address will not be published. Required fields are marked *

Most Popular

To Top